ಹುಬ್ಬಳ್ಳಿ: ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದಂತ ಪ್ರಧಾನಿ ನರೇಂದ್ರ ಮೋದಿಯವರು, ರೋಡ್ ಶೋ ನಡೆಸಿದ ವೇಳೆಯಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಭದ್ರತೆಯನ್ನು ಮೀರಿದಂತ ಯುವಕನೋರ್ವ ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ.
ಇಂದು ಮೋದಿಯವರು ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸುತ್ತಿದ್ದಂತ ಸಂದರ್ಭದಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದಂತ ಸಂದರ್ಭದಲ್ಲಿ ಭದ್ರತೆಯನ್ನು ಮೀರಿ ಯುವಕನೋರ್ವ ನಡೆದುಕೊಂಡಿದ್ದಾರೆ.
ಪ್ರಧಾನಿ ಮೋದಿಯವರ ಭದ್ರತೆಯನ್ನು ಮೀರಿ ಹುಬ್ಬಳ್ಳಿಯ ರೋಡ್ ಶೋ ವೇಳೆ, ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದಂತ ಪೊಲೀಸರು ಕೂಡಲೇ ಯುವಕನನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.