ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಕಬ್ಬಿಣದ ಕಂಬ, ತಾಯಿ-ಮಗಳು ಸಾವು

ಮುಂಬೈ (ಮಹಾರಾಷ್ಟ್ರ) : ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಕಬ್ಬಿಣದ ಕಂಬವೊಂದು ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಆಟೋದಲ್ಲಿದ್ದ ಮಹಿಳೆ ಮತ್ತು ಆಕೆಯ ಏಳು ವರ್ಷದ ಮಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಮುಂಬೈನ ಜೋಗೇಶ್ವರಿ (ಪೂರ್ವ) ನಲ್ಲಿರುವ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿರುವ ಸ್ಟೇಷನ್ ರಸ್ತೆಯಲ್ಲಿರುವ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಕಟ್ಟಡದಿಂದ ಕಬ್ಬಿಣದ ಕಂಬವೊಂದು ಮಹಿಳೆ ಮತ್ತು ಅವರ ಮಗಳನ್ನು ಹೊತ್ತೊಯ್ಯುತ್ತಿದ್ದ ಆಟೋ ಮೇಲೆ ಬಿದ್ದಿದೆ. ಘಟನೆಯಲ್ಲಿ ತಾಯಿ-ಮಗಳು ಸಾವನ್ನಪ್ಪಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Check Also

SSLC ಫಲಿತಾಂಶದಲ್ಲಿ ಮರೋಡಿಯ ಧನ್ವಿ ಸಂಜೀವ ಪೂಜಾರಿರವರಿಗೆ 448 ಅಂಕ

ಬೆಳ್ತಂಗಡಿ: 2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಬೆಳ್ತಂಗಡಿಯ ಮರೋಡಿಯ ನಿವಾಸಿ …

Leave a Reply

Your email address will not be published. Required fields are marked *

You cannot copy content of this page.