BREAKING NEWS : 3 ದಶಕದ ಬಳಿಕ ರಾಜೀವ್ ಗಾಂಧಿ ಹತ್ಯೆ ಆರೋಪಿ ‘ನಳಿನಿ ಶ್ರೀಹರನ್’ ಜೈಲಿನಿಂದ ಬಿಡುಗಡೆ

ವೆಲ್ಲೂರು : ಸುಪ್ರೀಂಕೋರ್ಟ್ ಆದೇಶದ ಒಂದು ದಿನದ ಬಳಿಕ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನ 31 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿ ಆದೇಶದ ಬಳಿಕ ನಳಿನಿ ಶ್ರೀಹರನ್ ಶನಿವಾರ ಸಂಜೆ ಬಿಡುಗಡೆಯಾಗಿದ್ದಾರೆ.

ಪೆರೋಲ್ ಷರತ್ತುಗಳ ಭಾಗವಾಗಿ ತನ್ನ ಉಪಸ್ಥಿತಿಯನ್ನ ಗುರುತಿಸಲು ಆಕೆ ಇಂದು ಬೆಳಿಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಳು.

ಅಂದ್ಹಾಗೆ, ಮೇ ತಿಂಗಳಲ್ಲಿ, ಸರ್ವೋಚ್ಚ ನ್ಯಾಯಾಲಯವು ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡು ಪೆರಾರಿವಾಲನ್ ಎಂಬ ಏಳನೇ ಅಪರಾಧಿಯನ್ನ ಬಿಡುಗಡೆ ಮಾಡಿತ್ತು. ಇದೇ ಆದೇಶವು ಉಳಿದ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.