March 18, 2026
WhatsApp Image 2024-11-12 at 3.15.32 PM
ಬೆಳ್ತಂಗಡಿ :  ಹಾಸ್ಟೆಲ್‌ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ಸಂಭವಿಸಿದೆ.
ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್‌ನ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಗ್ಗೆ ಸ್ಯಾನಿಟೈಸರ್‌ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬರಬೇಕಾಗಿದೆ.
ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.