ಸುಳ್ಯ: ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ, ತಾಯಿ ಮಗು ಮೃತ್ಯು

ಸುಳ್ಯ:  ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.