ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಒಂದುವರೆ ತಿಂಗಳ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ವ್ಯಾಕ್ಸಿನೇಷನ್ ಹಾಕಿಸಲಾಗಿತ್ತು.

ಇಂಜಕ್ಷನ್ ಕೊಟ್ಟ ಒಂದು ಗಂಟೆಯಲ್ಲೇ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರೇ ಕಾರಣ ಎಂದು ಆಸ್ಪತ್ರೆ ಮುಂದೆ ಪೋಷಕರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಒಂದುವರೆ ತಿಂಗಳ ಕಂದಮ್ಮನನ್ನು ಕಳೆದುಕೊಂಡಿರುವ ತಂದೆ-ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.