

ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆ, ಹಿರಿಯ ಜನಪದ ಹಾಡುಗಾರ್ತಿ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಅಲಿಯಾಸ್ ಸುಕ್ರಿ ಬೊಮ್ಮ ಗೌಡ ಅವರು ವಿಧಿವಶರಾಗಿದ್ದಾರೆ.
ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದರು.