ಕಲಬುರಗಿ : ಕಲಬುರಗಿ ಐಎಸ್ಡಿ ವಿಭಾಗದ ಎಸ್ಪಿ ಆಗಿರುವ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ವಿರುದ್ಧ ಹೆಡ್ ಕಾನ್ಸ್ಟೇಬಲ್ ಕಂಟೆಪ್ಪ ಗಂಭೀರ ಆರೋಪ ಮಾಡಿದ್ದಾರೆ. ಆಂತರಿಕ ಭದ್ರತಾ ವಿಭಾಗದಲ್ಲಿ ಎಎಸ್ಐ ಆಗಿರುವ ನನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ. ಕಲಬುರಗಿ ನಗರದ ಐವಾನ್ ಶಾಹೀ ಬಡವಾಣೆಯ ಪಿಡಬ್ಲುಡಿ ಕ್ವಾಟರ್ಸ್ನಲ್ಲಿ ಮಹಿಳಾ ಅಧಿಕಾರಿ ಹಾಗೂ ಐಪಿಎಸ್ ಅಧಿಕಾರಿ ಇಬ್ಬರು ಅನೈತಿಕ ಸಂಬಂಧದಲ್ಲಿ ತೊಡಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕಾನ್ಸ್ಟೇಬಲ್ ಕಂಟೆಪ್ಪನಿಗೆ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎಂದು ಆರೋಪಿಸಿದ್ದಾರೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಗ್ಗೆ ಕಾನ್ಸ್ಟೇಬಲ್ ಕಂಟೆಪ್ಪ ವಿಡಿಯೋ ಕೂಡ ಮಾಡಿಕೊಂಡಿದ್ದಾರಂತೆ. ಆದರೆ ಈ ವೇಳೆ ಪತ್ನಿ ಹಾಗೂ ಐಪಿಎಸ್ ಅಧಿಕಾರಿ ಇಬ್ಬರು ಅವರಿಗೆ ಹೊಡೆದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಂತೆ. ಕಳೆದ ಹಲವು ತಿಂಗಳಿನಿಂದ ಇಬ್ಬರ ನಡುವೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಹಿಳಾ ಎಎಸ್ಐ ಮತ್ತು ಅರುಣ್ ರಂಗರಾಜನ್ ಐಎಸ್ಡಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆಯೂ ಅಕ್ರಮ ಸಂಬಂಧದಲ್ಲಿ ಇದ್ದಾಗ ಸಿಕ್ಕಿ ಬಿದ್ದರು. ಆಗ ತಿಳಿ ಹೇಳುವ ಕೆಲಸ ಮಾಡಿದ್ದೆ. ಆದರೂ ಇಬ್ಬರು ಅಕ್ರಮ ಸಂಬಂಧ ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್ಐ ಜೊತೆ ನಿರಂತರವಾಗಿ ಸಂಬಂಧ ಮುಂದುವರಿಸಿದ್ದಾರೆ ಎಂದಿದ್ದಾರೆ. ಈ ಸಂಬಂಧ ಸದ್ಯ ಕಾನ್ಸ್ಟೇಬಲ್ ಕಂಟೆಪ್ಪ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಮತ್ತು ಪತ್ನಿ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಐಪಿಸಿ ಸೆಕ್ಷನ್ 323 , 324 , 498 , 376(2)(b), 342, 504, 506(2), 507, 420, 406, 500, 201, 109, 457 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
Check Also
ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ
ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …