ಪುಣೆ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದ ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅವಘಡದಲ್ಲಿ ದೇವಸ್ಥಾನದ ಗೋಡೆ ಕುಸಿದು ಆರು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಯ ಆರ್ಭಟ ಈ ದುರಂತಕ್ಕೆ ಕಾರಣವಾಗಿದೆ.
ಮೋಠೆವಾಡಿ ಗ್ರಾಮದ ಪ್ರಸಿದ್ಧ ಮುರಗಾಬಾಯಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸುಮಾರು 350ಕ್ಕೂ ಹೆಚ್ಚು ಭಕ್ತರು ದೇವಸ್ಥಾನದಲ್ಲಿ ನೆರೆದಿದ್ದರು. ಸಂಜೆ 5 ಗಂಟೆಯ ಸುಮಾರಿಗೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಯಿತು. ಮಳೆಯಿಂದ ರಕ್ಷಣೆ ಪಡೆಯಲು ಭಕ್ತರು ದೇವಸ್ಥಾನದ ಆವರಣದ ಗೋಡೆಯ ಆಶ್ರಯ ಪಡೆದಿದ್ದರು. ಈ ವೇಳೆ ಬಿರುಗಾಳಿಗೆ ಸಮೀಪದ ಶೀಟಿನ ಶೆಡ್ ಹಾರಿಬಂದು ಗೋಡೆಗೆ ಬಡಿದ ಪರಿಣಾಮ, ನಿರ್ಮಾಣ ಹಂತದಲ್ಲಿದ್ದ ಗೋಡೆ ಭಕ್ತರ ಮೇಲೆ ಉರುಳಿ ಬಿದ್ದಿದೆ.