December 23, 2024
WhatsApp Image 2023-06-15 at 5.33.49 PM

ಬೆಂಗಳೂರು: ರಾಜ್ಯದಲ್ಲಿ ನಡೆದಂತ ಜೈನಮುನಿ ಬರ್ಬರ ಹತ್ಯೆ, ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸೇರಿದಂತೆ ವಿವಿಧ ವಿಷಯಗಳನ್ನು ಖಂಡಿಸಿ ಬಿಜೆಪಿ ನಿನ್ನೆ ಪ್ರತಿಭಟನೆ ನಡೆಸಿದ್ದಲ್ಲದೇ, ಕಾಂಗ್ರೆಸ್ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ದೂರು ನೀಡಲಾಯಿತು.

ಈ ಬಗ್ಗೆ ಇಂದು ಸಿಎಂ ಸಿದ್ಧರಾಮಯ್ಯ ( CM Siddaramaiah ) ಖಡಕ್ ಟಾಂಗ್ ನೀಡಿದ್ದಾರೆ.

ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಟ್ವಿಟ್ ( Twitter ) ಮಾಡಿದ್ದು, ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ ಎಂದಿದ್ದಾರೆ.

ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದಿದ್ದಾರೆ.

ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.