May 21, 2025 2:21:46 PM
WhatsApp Image 2023-08-13 at 1.40.35 AM

ಉಡುಪಿ: ನಿಗದಿತ ಅವಧಿ ಮೀರಿ ಪಬ್‌ಗಳು ಕಾರ್ಯಚರಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೊಲೀಸರು, ಕಾರ್ಯಾಚರಣೆ ನಡೆಸಿ ಪಬ್ ಗಳ ಡಿಜೆಯನ್ನು ಸ್ಥಗಿತಗೊಳಿಸಿ ಎಚ್ಚರಿಕೆ ನೀಡಿದ್ದಾರೆ. ವಾರಾಂತ್ಯವಾದ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಮಣಿಪಾಲದಲ್ಲಿ ಅನಧಿಕೃತ ಪಬ್ ಗಳು ಮತ್ತು ಅವಧಿ ಮೀರಿ ಕಾರ್ಯಾಚರಿಸುತ್ತಿರುವ ಪಬ್ ಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಇತ್ತೀಚೆಗೆ ದೂರು ನೀಡಿದ್ದರು.ಈ ದೂರಿನ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿನ 6 ಅಕ್ರಮ ಪಬ್‌ನ ಡಿಜೆ ನಿಲ್ಲಿಸಿ ಅವುಗಳ ಮಾಲೀಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹಲವು ಪಬ್‌ಗಳಲ್ಲಿ ರಾಜಕೀಯ ನಾಯಕರ ಬೆಂಬಲದಿಂದ ತಡರಾತ್ರಿವರೆಗೂ ಮದ್ಯ, ಗಾಂಜಾ, ಧ್ವನಿವರ್ಧಕ ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಬ್‌ಗಳನ್ನು ನಿಗದಿತ ಅವಧಿ ರಾತ್ರಿ 12 ಗಂಟೆಯ ಒಳಗೆ ಮುಚ್ಚಲು ಪೊಲೀಸರು ತಾಕೀತು ಮಾಡಿದ್ದಾರೆ. ಮದ್ಯ ಹೊರತು ಯಾವುದೇ ಧ್ವನಿವರ್ಧಕ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>