ಉಡುಪಿ: ಚೈತ್ರ ಕುಂದಾಪುರ ಅರೆಸ್ಟ್..!

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Check Also

ಭಾಷೆ..ಗಡಿ ದಾಟಿದ ಯಕ್ಷಗಾನ: ಉಡುಪಿಯಲ್ಲಿ ಮೋದಿ ಊರಿನ ಕುವರರಿಗೆ ತರಬೇತಿ

ಉಡುಪಿ: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, …

Leave a Reply

Your email address will not be published. Required fields are marked *

You cannot copy content of this page.