December 27, 2024
WhatsApp Image 2023-09-13 at 8.57.58 AM

ಉಡುಪಿ:  ಸದಾ ಕಾಂಗ್ರೇಸ್ ವಿರುದ್ದ ಮುಸ್ಲಿಂ ರ ವಿರುದ್ದ ತನ್ನ ಭಾಷಣದಲ್ಲಿ ಕಿಡಿಕಾರುತ್ತಿದ್ದ ಹಿಂದೂ ನಾಯಕಿ ಚೈತ್ರಾ ಕುಂದಪುರ ವಂಚನೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದು, ಕಾಂಗ್ರೇಸ್ ನ ವಕ್ತಾರೆ ಮನೆಯಲ್ಲಿ ಎನ್ನುವ ಮಾಹಿತಿ ಇದೀಗ ಬಂದಿದ್ದು, ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್​ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.

ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ ಮಾಧ್ಯಮ ವಕ್ತಾರೆ ಅಂಜುಂ​ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ. ಅಂಜುಮ್ ಚೈತ್ರಾಳ ಸ್ನೇಹಿತೆಯಾಗಿದ್ದು ಈ ಹಿಂದೆ ಇಬ್ಬರು ಸಹೋದ್ಯೋಗಿಯಾಗಿದ್ದರು. ಆರೋಪಿಗೆ ಆಶ್ರಯ ನೀಡಿದ ವಿಚಾರವಾಗಿ ಅಂಜುಮ್ ಅವರಿಗೆ ಸಿಸಿಬಿ ಈಗ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.