ಈ ಮೊದಲು ವಿದ್ಯಾರ್ಥಿಗಳು ಉತ್ತರ ಬರೆಯಲು 3 ಗಂಟೆ 15 ನಿಮಿಷ ಸಮಯ ಕೊಡಲಾಗ್ತಿತ್ತು. 3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ.
ಸಮಯ ಕಡಿತಕ್ಕೆ ಬೋರ್ಡ್ ಕಾರಣ ನೀಡಿದೆ. ಮೊದಲು 3 ಗಂಟೆ 15 ನಿಮಿಷ ಇದ್ದ ಸಮಯದಲ್ಲಿ 100 ಅಂಕಗಳಿಗೆ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತಿತ್ತು. ಆದರೆ ಈಗ 70/80 ಅಂಕಗಳಿಗೆ ಲಿಖಿತ ಪರೀಕ್ಷೆ ಇದ್ದು, ಉಳಿದ ಅಂಕಗಳು ಇಂಟರ್‌ನಲ್ ಅಸೆಸ್ಮೆಂಟ್ ಗೆ ನೀಡಲಾಗ್ತಿದೆ. ಈ ಹಿನ್ನಲೆಯಲ್ಲಿ 15 ನಿಮಿಷ ಉತ್ತರ ಬರೆಯಲು ಕಡಿತ ಮಾಡಲಾಗಿದೆ ಅನ್ನೋದು ಇಲಾಖೆ ವಾದವಾಗಿದೆ. ಅಂಕಗಳು ಕಡಿಮೆ ಮಾಡಿದರು 15 ನಿಮಿಷ ಹೆಚ್ಚುವರಿ ಸಮಯ ಕೊಟ್ಟಿದ್ರೆ ಏನ್ ಸಮಸ್ಯೆ ಆಗುತ್ತೆ ಅನ್ನೋದು ಪೋಷಕರು, ಶಿಕ್ಷಣ ತಜ್ಞರ ಪ್ರಶ್ನೆಯಾಗಿದೆ.
You cannot copy content of this page.