ಬೆಳ್ಳಾರೆ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನಿಗೆ ರಾಷ್ಟ್ರೀಯ ತನಿಖಾದಳ ಬಂಧಿಸಿದೆ.
ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ(34)ಎಂಬವರನ್ನು ಬಂಧಿಸಿ ವಿಚಾರಣೆಗೊಳಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸಾಹಿದ್ ಬೆಳ್ಳಾರೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಮಂದಿ ಬಂಧನವಾಗಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿ ಇತ್ತೀಚೆಗೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ.ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದ್ರೆ 2 ಲಕ್ಷ ಬಹುಮಾನ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು.ಇದರ ಬೆನ್ನಲ್ಲೇ ಮತ್ತೆ ಮೂವರ ಬಂಧನವಾಗಿತ್ತು.