ಮಲ್ಪೆ: ಜೇನು ನೊಣ ದಾಳಿ ನಡೆಸಿ ಕಚ್ಚಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕೆಮ್ಮಣ್ಣು ನಿವಾಸಿ ಸಂಪಾ(53) ಮೃತ ಮಹಿಳೆ. ಇವರು ನ.11ರಂದು ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋಗಿದ್ದು, ಅಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಜೇನು ದಾಳಿ ನಡೆಸಿ ಕಚ್ಚಿತ್ತೆನ್ನಲಾಗಿದೆ.
ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಸಂಜೆ ವೇಳೆ ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.