ರಾಜ್ಯದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಇದರಿಂದ ಕರ್ನಾಟಕದ ಜನತೆ ಆತಂಕಕ್ಕೀಡಾಗಿತ್ತು. ರಾಯಚೂರಿನಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ. 5 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ.ರಾಯಚೂರಿನ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ.
ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ವೈರಸ್ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ.
ಸೊಳ್ಳೆ ಕಡಿತದಿಂದ ಬರುವ ಝಿಕಾ ವೈರಸ್, ಆಂಧ್ರ, ತೆಲಂಗಾಣ ಸೇರಿ ರಾಜ್ಯದ ಬೇರೆ ಯಾವ ಜಿಲ್ಲೆಯ ಲಿಂಕ್ ಇದೆ ಅನ್ನೋದರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೇಂದ್ರದ ವೈದ್ಯರ ತಂಡ ಏಕಾಏಕಿ ದಿಢೀರ್ ಭೇಟಿ ನೀಡಿ ಝಿಕಾ ವೈರಸ್‌ಗೆ ಒಳಗಾದ ಬಾಲಕಿ ಹಾಗೂ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸಿದೆ.
ಝಿಕಾ ವೈರಸ್ ಇತಿಹಾಸ
ಈಡಿಸ್ ಸೊಳ್ಳೆಯ ಕಚ್ಚುವಿಕೆಯ ಮೂಲಕ ಝಿಕಾ ವೈರಸ್ ಸೋಂಕು ಹರಡುತ್ತದೆ. ಇದು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಸೋಂಕುಗಳನ್ನು ಹರಡುತ್ತದೆ. ಈ ವೈರಸ್ ಅನ್ನು ಮೊದಲು 1947ರಲ್ಲಿ ಉಗಾಂಡಾದಲ್ಲಿ ಗುರುತಿಸಲಾಯಿತು. ಕೇರಳದಲ್ಲಿ 2021ರಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿತ್ತು.
ಝಿಕಾ ವೈರಸ್ ನಿವಾರಣಾ ಕ್ರಮವೇನು?
ಈ ಸೋಂಕು ತಗುಲಿದವರಿಗೆ ಹೆಚ್ಚು ದ್ರವಾಹಾರ ಸೇವಿಸುವಂತೆ ತಿಳಿಸಲಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಳದ ಆಹಾರ ಸೇವಿಸಲು ಸಲಹೆ ನೀಡಲಾಗಿದೆ.
ಝಿಕಾ ಸೋಂಕಿನ ಲಕ್ಷಣಗಳೇನು?
ಸೋಂಕು ಅತಿ ಗಂಭೀರ ಸ್ವರೂಪ ತಾಳುವುದಿಲ್ಲ. ಈ ಸೋಂಕಿನಿಂದ ಸಾವು ಸಂಭವಿಸುವ ಸಾಧ್ಯತೆಯೂ ಕಡಿಮೆ. ಎರಡು ದಿನಗಳಿಂದ ಏಳು ದಿನಗಳವರೆಗೆ ಈ ಲಕ್ಷಣಗಳು ಇರುತ್ತವೆ. ಜಾಂಡಿಸ್ ಬಗೆಯ ಲಕ್ಷಣಗಳು ರೋಗಿಯಲ್ಲಿ ಗೋಚರವಾಗಬಹುದು. ಕಣ್ಣು ಕೆಂಪಗಾಗುವುದು, ಜ್ವರ, ಗಂಟು ನೋವು, ಕೀಲು, ಸ್ನಾಯು ನೋವು ಇದರ ಸಾಮಾನ್ಯ ಲಕ್ಷಣ. ತಲೆನೋವು, ಕೆಂಪು ಕಲೆಗಳೂ ಆಗುತ್ತವೆ