January 15, 2026
WhatsApp Image 2025-12-12 at 6.44.26 PM

ಮಂಗಳೂರು: ಡಿಸೆಂಬರ್ 12  ರಂದು ಬೆಳಿಗ್ಗೆ 8.0 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ನಿರಂತರ 04  ಗಂಟೆಗಳ ಕಾಲ ಸ್ಕೇಟಿಂಗ್ ನಲ್ಲಿ ನೃತ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತಮ್ಮ ಹೆಸರನ್ನು ಸೇರ್ಪಡಿಗೊಳಿಸಿದ್ದಾರೆ.

ಮಂಗಳೂರು ಚಿಲಿಂಬಿಯ ಉದಯ್ ಕುಮಾರ್ ಮತ್ತು ಶಶಿರೇಖಾ ಎಸ್ ಅವರ ಪುತ್ರಿ ಸುಶ್ರಾವ್ಯ. ಪ್ರಸುತ್ತ ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ಮಂಗಳೂರಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ,ಅವರ ಪರಿಶ್ರಮ ಮತ್ತು ಕಲಾಸಾಧನೆಗೆ ಜಾಗತಿಕ ಮಾನ್ಯತೆ ಲಭಿಸಿದೆ.

ಶುಶ್ರಾವ್ಯ ಅವರು ಕಳೆದ 14 ವರ್ಷಗಳಿಂದ ಸ್ಕೇಟಿಂಗ್ ಕ್ಷೇತ್ರದಲ್ಲಿ ತಮ್ಮ ಗುರುಗಳಾದ ಸುಮನ್ ಶ್ರೀಕಾಂತ್ ಇವರ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ಮಾಡುತ್ತಿದ್ದು, ಅದೇ ರೀತಿಯಲ್ಲಿ, ಭಾರತೀಯ ಶಾಸ್ತ್ರೀಯ ನೃತ್ಯದ ಜೂನಿಯರ್ ಪರೀಕ್ಷೆಯನ್ನು ಪ್ರಥಿಮಾ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಸೀನಿಯರ್ ಪರೀಕ್ಷೆಯನ್ನು ಸುರೇಶ್ ಅಟ್ಟಾವರ ಅವರ ಮಾರ್ಗದರ್ಶನದಲ್ಲಿ ಪೂರೈಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಲಾತ್ಮಕ ಸ್ಕೇಟಿಂಗ್ (Artistic Skating) ಅನ್ನು ಸ್ವತಃ ಕಲಿತು ಅಭ್ಯಾಸ ಮಾಡುತ್ತಿದ್ದಾರೆ.

ಇವರು ತಾಲೂಕು ಮಟ್ಟದ ವಿದ್ಯಾ ಭಾರತೀ ಸ್ಪರ್ಧೆಯಲ್ಲಿ ಮೊದಲ ಸ್ಥಾನದಲ್ಲಿ ವಿಜೇತರಾಗಿ, ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡು, ನಂತರ ನೇರತ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಎರಡು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಜೊತೆಗೆ SGFI (School Games Federation of India) ಮಟ್ಟಕ್ಕೂ ಆಯ್ಕೆಯಾಗಿರುವುದು ಇವರ ವಿಶೇಷ ಸಾಧನೆ.

ಇದೇ ರೀತಿಯಲ್ಲಿ, RSFI ಜಿಲ್ಲಾ ಮಟ್ಟದ ಅನೇಕ ಸ್ಪರ್ಧೆಗಳಲ್ಲಿ ಬಹುಮಾನಗಳು ಹಾಗೂ ಪ್ರಶಂಸೆಗಳನ್ನು ಪಡೆದು, ರಾಜ್ಯ ಮಟ್ಟಕ್ಕೂ ಆಯ್ಕೆಯಾಗಿದ್ದಾರೆ. ಹಲವಾರು ಕಾರ್ಯಕ್ರಮಗಳಲ್ಲಿ ಇವರನ್ನು ಸನ್ಮಾನಿಸಲಾಗಿದೆ. ಸಂತ ಆಗ್ನೆಸ್ (ಸ್ವಯತ್ತ) ಪದವಿ ಕಾಲೇಜಿನಲ್ಲಿ ನಡೆದ “Agnes Got Talent” ಸ್ಪರ್ಧೆಯಲ್ಲೂ ಶುಶ್ರಾವ್ಯ ಅವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಡಿಸೆಂಬರ್ 12  ರಂದು ಬೆಳಿಗ್ಗೆ 8.0 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ನಿರಂತರ 04  ಗಂಟೆಗಳ ಕಾಲ ಸ್ಕೇಟಿಂಗ್ ನಲ್ಲಿ ನೃತ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತಮ್ಮ ಹೆಸರನ್ನು ಸೇರ್ಪಡಿಗೊಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.