ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದಮ್ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿದೆ.. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.