ಇನ್ಮುಂದೆ 10 ಸೆಂಟ್ಸ್ ವರೆಗೆ ಕನ್ವರ್ಷನ್ ಸುಲಭ- ಶಾಸಕ ರಘುಪತಿ ಭಟ್

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 10 ಸೆಂಟ್ಸ್‌ವರೆಗೆ ಕೃಷಿ ಭೂಮಿಯನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ,ಇದರೊಂದಿಗೆ ಉಡುಪಿ ಜನತೆಯ ಬಹುಕಾಲದ ಬೇಡಿಕೆಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ನಡೆಸಿದ ಅವಿರತ ಶ್ರಮಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ ಎಂದು ಹೇಳಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಅಥವಾ 3000 ಚದರ ಅಡಿವರೆಗೆ ಕೃಷಿ ವಲಯದಲ್ಲಿ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ವಲಯ ಬದಲಾವಣೆಗೆ ಸರಕಾರ ಹೊರಡಿಸಿದ ಆದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು. ಹಿಂದೆ ನಗರಾಭಿವೃದ್ಧಿ ಇಲಾಖೆ ವಲಯ ನಿಯಮಾವಳಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸಾರ್ವಜನಿಕರ ಸಲಹೆ ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು 30 ದಿನಗಳ ಕಾಲಾವಕಾಶ ನೀಡಿತ್ತು. ಇದೀಗ ಜ.11ರಂದು ಇಲಾಖೆಯ ಅಧೀನ ಕಾರ್ಯದರ್ಶಿಯವರು ಹೊರಡಿಸಿದ ಆದೇಶದಲ್ಲಿ 10 ಸೆಂಟ್ಸ್ ವರೆಗಿನ ಕೃಷಿ ವಲಯದ ಜಮೀನು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ವಲಯ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

Check Also

ಬಿಜೆಪಿಯ ಉಚ್ಚಾಟನೆಗೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ : ರಘುಪತಿ ಭಟ್

ಉಡುಪಿ: ಬಿಜೆಪಿಯಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯಿಂದ ನನಗೆ ಈವರೆಗೆ ಯಾವುದೇ ನೋಟಿಸ್ …

Leave a Reply

Your email address will not be published. Required fields are marked *

You cannot copy content of this page.