ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (63) ಎಂಬವರು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ.
ಮೂಲತಃ ಮಂಗಳೂರಿನ ಕಾವೂರು, ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಚಲಾಯಿಸುತ್ತಿದ್ದಾಗ ಹೃದಯಾಘಾತಕ್ಕೀಡಾದರು. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ, ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ