ನವದೆಹಲಿ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೊರೊನಾ ಸೋಂಕು ಮತ್ತು ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಲಲಿತ್ ಮೋದಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಸಂಬಂಧ ಮಾಹಿತಿ ನೀಡಲಾಗಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕು ತಗುಲಿತ್ತು. ನ್ಯುಮೋನಿಯಾವೂ ಇದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.