May 28, 2025 8:31:05 AM
WhatsApp Image 2023-03-14 at 11.27.54 AM

ಮಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಇದೇ ಮಾ.16ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ, ಮಂಜುನಾಥ ಭಂಡಾರಿ ಹಾಗೂ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರು ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್ ಭಾಗವಹಿಸುವರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>