March 14, 2026
WhatsApp Image 2023-06-14 at 3.43.32 PM

ನೆಲ್ಯಾಡಿ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಚಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಂಪ್‌ವೆಲ್ ನಲ್ಲಿ ನಡೆದಿದೆ. ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್‌ (25ವ.) ಮೃತಪಟ್ಟ ಯುವಕ. ಇವರು ಬೆಂದೂರ್‌ವೆಲ್‌ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.