ಬೆಂಗಳೂರು: ಚಂದ್ರಯಾನ 3 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಸ್ರೋ ತಂಡವನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.
ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹ ನೌಕೆಯನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ಯಶಸ್ವಿ ಉಡಾವಣೆ ಮಾಡಲಾಗಿದೆ. ಉಡಾವಣೆಯಾಗಿರುವ ನೌಕೆಯು ಚಂದ್ರನ ಮೇಲ್ಮೈ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು ಆಗಸ್ಟ್ 23 ಇಲ್ಲವೇ 24ರಂದು ಇಳಿಯಲಿದೆ.
Congratulations to @isro for the successful launch of Chandrayaan3 mission.
It is a proud moment for India and a new milestone in India's space research & innovation.
This achievement will inspire young minds of India to take up research in Science and Technology.… pic.twitter.com/k6UaEjPIN2
— CM of Karnataka (@CMofKarnataka) July 14, 2023