ಉಡುಪಿ: ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ನಾಪತ್ತೆ..!

ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ.

ಹೊಡೆಯ ನಿವಾಸಿ 39ವರ್ಷದ ಉಸ್ತಾದ್ ಜುಬೇರ್ ಎಂಬವರ ಪತ್ನಿ 32 ವರ್ಷದ ಅನ್ಸಿಯಾ ಹಾಗೂ ಒಂದು ವರ್ಷದ ಹೆಣ್ಣು ಮಗು ಅಜೀನ್ ನಾಪತ್ತೆಯಾಗಿದ್ದಾರೆ.

ಅನ್ಸಿಯಾ ಅವರು ತನ್ನ ಮಗುವಿನೊಂದಿಗೆ ನವೆಂಬರ್ 7ರಂದು ಬೆಳಿಗ್ಗೆ 10ಗಂಟೆಗೆ ತಾನು ಕೆಲಸ ಮಾಡುತ್ತಿದ್ದ ಹೈರಿಚ್ ಆಫೀಸ್ ಗೆ ಹೋಗುವುದಾಗಿ ಮನೆಯಿಂದ ಹೋಗಿದ್ದರು. ಆದರೆ ಸಂಜೆ 5 ಗಂಟೆಯಾದರೂ ಮನೆಗೆ ಬಂದಿರುವುದಿಲ್ಲ. ಬಳಿಕ‌ ಪತಿ ಜುಬೇರ್ ಅವರು ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈವರೆಗೂ ಪತ್ನಿ ಹಾಗೂ‌ ಮಗವಿನ ಸುಳಿವು ಪತ್ತೆಯಾಗಿಲ್ಲ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ತಾಯಿ ಮತ್ತು ಮಗವಿನ ಬಗ್ಗೆ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 0820-2537 999 ಅಥವಾ ಮೊಬೈಲ್ ಸಂಖ್ಯೆ 94808 05447 ಅನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.