ಗುಜರಾತ್ : ತನ್ನ ನವಜಾತ ಶಿಶುವನ್ನು ಕಟ್ಟಡದಿಂದ ಎಸೆದು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕಿಯನ್ನು ಗುಜರಾತ್‌ನ ಸೂರತ್ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಬಾಲಕಿ 20 ವರ್ಷದ ಯುವಕನೊಂದಿಗೆ ಸಂಬಂಧ ಹೊಂದಿದ್ದು, ಅದರಿಂದ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.
ಇದರಿಂದ ತಪ್ಪಿಸಿಕೊಳ್ಳಲು, ಆಕೆ ಮಗುವನ್ನು ಎಸೆಸಿದ್ದಾಳೆ ಎಂದು ತಿಳಿದುಬಂದಿದೆ.
ಸೋಮವಾರ ಬೆಳಿಗ್ಗೆ ನಗರದ ಮಗ್ದಲ್ಲಾ ಪ್ರದೇಶದಲ್ಲಿ ರಸ್ತೆಯ ಮೇಲೆ ಬಿದ್ದಿರುವ ನವಜಾತ ಶಿಶುವನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಮಗು ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ನವಜಾತ ಶಿಶುವನ್ನು ಕಟ್ಟಡದಿಂದ ಎಸೆದಿರುವುದು ತನಿಖೆಯಿಂದ ತಿಳಿದುಬಂದಿದೆ ಮತ್ತು ಸಿಸಿಟಿವಿ ದೃಶ್ಯಗಳು ಸಹ ಅದನ್ನು ದೃಢಪಡಿಸಿವೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 315ರ ಅಡಿಯಲ್ಲಿ ಬಾಲಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ 20 ವರ್ಷದ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.