ಉತ್ತರಪ್ರದೇಶ : ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಲುಧಿಯಾನ ಮತ್ತು ರಾಯ್ ಬರೇಲಿಯಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 4:30 ರ ಸುಮಾರಿಗೆ ಅಪಘಾತಕ್ಕೀಡಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಎಂಸಿ ವಾಹನ ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾದ ಪರಿಣಾಮ ಬಸ್ ಚಾಲಕನಿಗೆ ತೂಕಡಿಕೆ ಉಂಟಾಗಿತ್ತು ಎನ್ನಲಾಗಿದೆ.
ಅಪಘಾತದ ಸ್ಥಳದಿಂದ ಬಸ್ ಅನ್ನು ಹೊರತೆಗೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.