ಗಂಡನ ಬಿಟ್ಟು ಪ್ರಿಯಕರನ ಜೊತೆಗೆ ಹೋದವಳ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆ…!

ಹಾಸನ : ಮದುವೆಯಾಗಿ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿ ಕೊನೆಗೆ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಕಾವ್ಯ(25) ಎಂದು ಗುರುತಿಸಲಾಗಿದೆ. ಪ್ರಿಯಕರ ಕಾವ್ಯಳ ಶವವನ್ನು ಯಾರಿಗೂ ತಿಳಿಯದಂತೆ ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವ ಘಟನೆ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅರಕಲಗೂಡು ತಾಲೂಕಿನ, ಮುದ್ಲಾಪುರ ಗ್ರಾಮದ ಕಲ್ಪನಾ ಅವರ ಪುತ್ರಿ ಕಾವ್ಯ ಬಿಬಿಎಂ ಓದಿದ್ದು, ಅಕ್ಷಯ್‌ ಎಂಬ ಯುವಕನ್ನು ಪ್ರೀತಿಸಿ ಮದುವೆಯಾಗಿದ್ದಳು, ಆದರೆ ಮದುವೆಯಾದ ಕೆಲವೇ ತಿಂಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ ಬಾರದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿ ಅಕ್ಷಯ್ ಜೊತೆ ವಿವಾಹ ಸಂಬಂಧ ಮುರಿದುಕೊಂಡಿದ್ದಳು.ಬಳಿಕ ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಕಾವ್ಯಾ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದ ಅವಿನಾಶ್‌ನನ್ನು ಪ್ರೀತಿಸುತ್ತಿದ್ದಳು. ಕಳೆದ 2 ವರ್ಷಗಳಿಂದ ಅವಿನಾಶ್ ಮನೆಯಲ್ಲಿಯೇ ವಾಸವಿದ್ದ ಕಾವ್ಯ ತಾಯಿಯ ಬಳಿ ಬೆಂಗಳೂರಿನಲ್ಲೇ ಇರುವುದಾಗಿ ಹೇಳಿದ್ದಳು. ಆದರೆ ಕಳೆದ ಕೆಲ ದಿನಗಳಿಂದ ಮೊಬೈಲ್ ಸಂಪರ್ಕಕಕ್ಕೆ ಕಾವ್ಯ ಸಿಗದೆ ಇದ್ದ ಹಿನ್ನಲೆ ಕಾವ್ಯಳ ತಾಯಿ ಆತಂಕಗೊಂಡಿದ್ದರು. ನಂತರ ಕಲ್ಪನಾ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರು ಫೋನ್ ಮಾಡಿ, ನಿಮ್ಮ ಮಗಳನ್ನು ಹೂತು ಹಾಕಿದ್ದಾರೆ ಎಂದು ಗ್ರಾಮದಲ್ಲಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದರು.ಇದಾದ ಬಳಿಕ ಮಗಳು ಕಾಣೆಯಾಗಿರುವ ಬಗ್ಗೆ ಕಲ್ಪನಾ ಹೊಳೆನರಸೀಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವಿನಾಶ್‌ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾವ್ಯಳ ಶವವನ್ನು ಕಬ್ಬಿನಗದ್ದೆಯಲ್ಲಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ. ಅವಿನಾಶ್ ಹಾಗೂ ಆತನ ಪೋಷಕರೇ ನನ್ನ ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂದು ಕಲ್ಪನಾ ಆರೋಪಿಸಿದ್ದಾರೆ. ನವೆಂಬರ್ 25 ರಂದು ಕಾವ್ಯಳ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಅವಿನಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ 18 ದಿನಗಳ ಹಿಂದೆ ರಾತ್ರಿ 12 ಗಂಟೆ ವೇಳೆಗೆ ಕಾವ್ಯಳ ಶವವನ್ನು ಹೊತ್ತೊಯ್ದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿ ತಿಳಿಸಿದ್ದಾನೆ.ಕಾವ್ಯ ಶವವನ್ನು ಹೂತು ಹಾಕಿದ್ದ ಜಾಗವನ್ನು ಅವಿನಾಶ್ ತೋರಿಸಿದ್ದಾನೆ. ತಹಶೀಲ್ದಾರ್ ಕೃಷ್ಣಮೂರ್ತಿ ಸಮ್ಮುಖದಲ್ಲಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕಾವ್ಯಳದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Check Also

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು- 144 ಸೆಕ್ಷನ್‌ ಜಾರಿ..!

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು …

Leave a Reply

Your email address will not be published. Required fields are marked *

You cannot copy content of this page.