ಬೆಂಗಳೂರು : ಐಟಿಸಿಟಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ (JDS candidate Prabhakar Reddy) ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದಿದ್ದು, ಮುಂದುವರಿದ ಶೋಧ ಕಾರ್ಯ ನಡೆಸಲಾಗುತ್ತಿದೆ.
ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಅವರ ಮೈಲಸಂದ್ರದ ಸಾಯಿ ರಿಯಲೇಟರ್ಸ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆದ್ದಾರೆ, ಬಳಿಕ ಅವರ ಆಫೀಸ್ ಬಾಯ್ ರಮೇಶ್ ಎಂಬಾತನನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಐಟಿ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ರಮೇಶ್‌ನನ್ನು ಕರೆದೊಯ್ದುದಿದ್ದಾರೆ. ಸೈಟ್ ವ್ಯವಹಾರದಲ್ಲಿ ಆಫೀಸ್ ಬಾಯ್ ರಮೇಶ್ ಹೆಸರು ಬಳಕೆ ಮಾಡಲಾಗಿರುವ ಮಾಹಿತಿ ಬಹಿರಂಗವಾಗಿದೆ.