May 15, 2026
image - 2026-05-15T141253.831

ಉಳ್ಳಾಲ: ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆಯನ್ನು ಹೊತ್ತೊಯ್ಯುತಿದ್ದ ಕ್ಯಾಂಟರ್ ನಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಾಜ ರಸ್ತೆಯಲ್ಲೇ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ತೊಯ್ಯುತ್ತಿದ್ದ ಬೃಹತ್ ಕ್ಯಾಂಟರ್ ಒಂದರಿಂದ ತಾಂತ್ರಿಕ ದೋಷದಿಂದಾಗಿ ಭಾರೀ ಪ್ರಮಾಣದ ಫಿಶ್ ಆಯಿಲ್ ರಸ್ತೆಯಲ್ಲೇ ಸೋರಿಕೆಯಾಗಿದೆ. ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ವರೆಗೂ ಫಿಶ್ ಆಯಿಲ್ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರಲ್ಲದೆ, ತ್ರಿಚಕ್ರ ವಾಹನ ಸವಾರರು ಕೂಡ ರಸ್ತೆಯಲ್ಲಿ ಜಾರಿ ಬಿದ್ದಿದ್ದಾರೆ.

ಉದ್ರಿಕ್ತ ಸ್ಥಳೀಯರು ಫಿಶ್ ಮೀಲ್ ಆಯಿಲ್ ಸಾಗಿಸುತ್ತಿದ್ದ ಕ್ಯಾಂಟರ್ ಉಳ್ಳಾಲ ಬೈಲಿನಲ್ಲಿ ಅಡ್ಡ ಹಾಕಿ ತಡೆದು ನಿಲ್ಲಿಸಿ ಪ್ರತಿಭಟಿಸಿದ್ದಾರೆ. ಕ್ಯಾಂಟರಿಂದ ಲಕ್ಷಗಟ್ಟಲೆ ಮೌಲ್ಯದ ಆಯಿಲ್ ಸೋರಿಕೆಯಾಗಿದ್ದು, ಆಯಿಲನ್ನು ಬೇರೊಂದು ಕ್ಯಾಂಟರ್ ಗೆ ತುಂಬಿಸಲಾಗಿದೆ. ಘಟನೆಯಿಂದ ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ತನಕ ಕೆಲಕಾಲ ಏಕಮುಖ ರಸ್ತೆಯ ಸಂಚಾರ ಸ್ಥಗಿತಗೊಳಿಸಲಾಗಿತ್ತು

About The Author

Leave a Reply

Your email address will not be published. Required fields are marked *

You cannot copy content of this page.