ಕಾರ್ಕಳ: ಖಾಸಗಿ ಸಂಸ್ಥೆಯ ಮಹಿಳಾ ಸಿಬಂದಿಯೋರ್ವರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 14ರಂದು ನಡೆದಿದೆ.
ನಗರದ ಮಾರ್ಕೆಟ್ ಬಳಿಯ ನಿವಾಸಿ, ವಿವಾಹಿತೆ ಪ್ರಮೀಳಾ ದೇವಾಡಿಗ (32) ಆತ್ಮಹತ್ಯೆ ಮಾಡಿಕೊಂಡವರು. ಇವರು ಕಾರ್ಕಳ ಪೇಟೆಯ ಮಾರ್ಕೆಟ್ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇತರ ಸಿಬಂದಿ ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಂದರ್ಭ ಪ್ರಮೀಳಾ ನೇಣು ಬಿಗಿದಿರುವುದು ಕಂಡು ಬಂದಿದೆ. ಅವರು ನೇಣು ಬಿಗಿಯಲು ಮನೆಯಿಂದಲೇ ಸೀರೆ ತಂದಿರಬೇಕು ಎಂದು ಶಂಕಿಸಲಾಗಿದೆ.ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಮೃತರು ಪತಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದೆ.