December 21, 2024
WhatsApp Image 2024-07-08 at 8.41.09 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ‌ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜು ಮುಖ್ಯಸ್ಥರುಗಳು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.