
ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15), ಆಶೀಶ್ (14) ನೀರು ಪಾಲಾದವರು. ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ. ನೀರುಪಾಲಾದ ಮೂವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
