ಬೆಳ್ತಂಗಡಿ : ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ನಟಿ ಶ್ರುತಿ ಭೇಟಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ರುತಿ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್ ಜನಾರ್ಧನ ಅವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿ ಸಂಸ್ಥೆಯ ಬಗ್ಗೆ ಪ್ರಾಸ್ತಾವಿಕವಾಗಿ ಪರಿಚಯಿಸಿ ಸನ್ಮಾನ ನೀಡಿ ಗೌರವಿಸಿದರು.

ಇನ್ನು ನಟಿ ಶ್ರುತಿ ಅವರು ಮಾತನಾಡಿ ‘ಪೂಜ್ಯ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಂಸ್ಥೆಯಲ್ಲಿ ಅನೇಕ ಮಹಿಳೆಯರು ಉದ್ಯೋಗ ನಡೆಸುತ್ತಾ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇನ್ನೂ ಇಂತಹ ಸಹಸ್ರಾರು ಮಹಿಳೆಯರ ಬಾಳು ಹಸನಾಗಲಿ’ ಎಂದು ಹಾರೈಸಿದರು.

Check Also

ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ

ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ …

Leave a Reply

Your email address will not be published. Required fields are marked *

You cannot copy content of this page.