ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದೆ.
ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರು ಚಾಲಕ ಸೊಂಟಕ್ಕೆ ಗಾಯಗೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ, ಬೈಕ್ ಸವಾರರ ಪೈಕಿ ಪುರುಷೋತ್ತಮ ಮೂಗಿನ ಭಾಗಕ್ಕೆ ಗಾಯವಾಗಿದ್ದು, ದೀನ ರಾಜ್ ದೇಹ ಮತ್ತು ತಲೆಗೆ ಗಾಯವಾಗಿದ್ದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ,
ಬೈಕ್ ನ್ನು ಒವರ್ ಟೇಕ್ ಮಾಡಿ ಕಾರು ಮುನ್ನುಗುತ್ತಿದ್ದ ಸಂದರ್ಭ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.