ಕೊಡಗು : ಕೊಡಗು ಜಿಲ್ಲೆಯಲ್ಲಿ ಯುವತಿಯ ಬರ್ಬರ ಕೊಲೆ ( Murder) ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.
ಕೊಲೆಯಾದ ಯುವತಿಯನ್ನು ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಬುಟ್ಟಿಯಂಡ ಆರತಿ (24) ಎಂದು ಗುರುತಿಸಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.