April 16, 2026
WhatsApp Image 2026-04-16 at 10.05.45 AM

ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣ ಬಳಿ ನಡೆದಿದೆ.

ಚಿಕ್ಕಮಗಳೂರು ಮೂಲದ ಅಮೃತ, ತೇಜಶ್ವಿನಿ, ಧನ್ಯ, ದೀಪಿಕ, ದಿಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃ*ತರಾಗಿದ್ದಾರೆ. ಗುರುವಾರ (ಏ.16) ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೊಲೆರೊ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲೇ ಮೃ*ತಪಟ್ಟಿದ್ದು, ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಇದನ್ನೂ ಓದಿ : ಕುಂದಾಪುರ: ರಸ್ತೆ ದಾಟಲು ಮುಂದಾದಾಗ ಕಾರು ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು ಅಪಘಾತದಲ್ಲಿ ಗಾಯಗೊಂಡ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.