BREAKING NEWS: ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಬೋರ್ಡ್ ಕಡ್ಡಾಯ

ಬೆಂಗಳೂರು: ಪೊಲೀಸ್ ಠಾಣೆಗೆ ಬರುವಂತ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಠಾಣೆಗಳಲ್ಲಿ ದಾಖಲಾಗುವಂತ ದೂರುಗಳ ಸಂಬಂಧ ಯಾರನ್ನು ಸಂಪರ್ಕಿಸಬೇಕು ಎನ್ನುವ ಬಗ್ಗೆ ಬೋರ್ಡ್ ಗಳಲ್ಲಿ ಸಂಪರ್ಕ ಸಂಖ್ಯೆಯನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಡಿಜಿ ಮತ್ತು ಐಜಿಪಿ ಆದೇಶಿಸಿದ್ದಾರೆ.

ಈ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅವರು ಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ಒಳಗೊಂಡ ನಾಮಫಲಕ ಅಳವಡಿಸುವುದನ್ನು ಕಡ್ಡಾಯಗೊಳಿಸಿದ್ದಾರೆ.

ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಪಿ, ಎಎಸ್ ಪಿ, ಡಿವೈಎಸ್ ಗಳ ಸಂಪರ್ಕ ಸಂಖ್ಯೆ, ಕಮೀಷನರೇಟ್ ವ್ಯಾಪ್ತಿಯಲ್ಲಿ ಕಮೀಷನರ್, ಎಸಿಪಿ, ಡಿಸಿಪಿಗಳ ದೂರವಾಣಿ ಸಂಖ್ಯೆಗಳನ್ನು ಆಯ್ದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಫಲಕದಲ್ಲಿ ಅಳವಡಿಸುವಂತೆ ಸೂಚಿಸಿದ್ದಾರೆ.

ಇನ್ನೂ ಪೊಲೀಸ್ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ಕನ್ನಡ ಮತ್ತು ಇಂಗ್ಲೀಷನ್ ಎರಡು ಭಾಷೆಯಲ್ಲಿ ಹಾಕಬೇಕು. ದಿನಾಂಕ 20-06-2023ರ ಒಳಗಾಗಿ ನಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಅಳವಡಿಸಿದ ಬಗ್ಗೆ ಈ ಕಚೇರಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.