ಬೆಳ್ತಂಗಡಿ : ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಜ್ವರ ಹಾವಳಿ- ಓರ್ವ ಮೃತ್ಯು..!

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಮಲ್ನೋಡಿ ಎಂಬಲ್ಲಿಯ ನಿವಾಸಿ ದಿವಾಕರ ಶೆಟ್ಟಿ (50) ಎಂಬವರು ಡೆಂಗಿ ಜ್ವರಕ್ಕೆ ತುತ್ತಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಕಳೆದ 15 ದಿನಗಳಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ – ಅವರನ್ನು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕವಾಗಿ ಡೆಂಗಿ ಜ್ವರ ಹರಡುತ್ತಿದೆ. ತಾಲೂಕಿನ ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ ಪೀಡಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡೆಂಗಿ ಜ್ವರ ಹರಡುತ್ತಿದೆ. ವಾತಾವರಣವೂ ಡೆಂಗಿ ಹರಡಲು ಪೂರಕವಾಗಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Check Also

ಕಾರ್ಕಳ: ಬೈಕ್ ಢಿಕ್ಕಿ- ವಿದ್ಯಾರ್ಥಿನಿ ಮೃತ್ಯು..!

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ …

Leave a Reply

Your email address will not be published. Required fields are marked *

You cannot copy content of this page.