ಕೊನೆಗೂ ‘ವಿಪಕ್ಷ ನಾಯಕ’ನ ಹೆಸರು ಘೋಷಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ : ರಾಜ್ಯ ಬಿಜೆಪಿಯಲ್ಲಿ ( BJP Karnataka ) ಪ್ರತಿಪಕ್ಷದ ನಾಯಕರಿಲ್ಲದೇ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲಾಗುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ನಾಯಕರು ( Congress Leaders ) ವಾಗ್ಧಾಳಿ ಕೂಡ ನಡೆಸುತ್ತಿದ್ದಾರೆ.

ಈ ನಡುವೆ ಕೊನೆಗೂ ವಿಪಕ್ಷ ನಾಯಕನ ಹೆಸರು ಪ್ರಕಟಿಸೋದಕ್ಕೆ ಬಿಜೆಪಿಯಿಂದ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ( Farmer CM Basavaraj Bommai ) ಅವರು, ಪ್ರಧಾನಿ ನರೇಂದ್ರ ಮೋದಿ ( PM Narendra Modi ) ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ‌. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಹೇಳಿದ್ದಾರೆ.‌

ಪ್ರತಿ ಪಕ್ಷಗಳು ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಸಭೆ ಮಾಡುತ್ತಿವೆ. ಆದರೆ ಇಡೀ ಭಾರತದಲ್ಲಿ ಪ್ರತಿ ಪಕ್ಷಗಳು ಶಕ್ತಿಯುಯವಾಗಿಲ್ಲ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ ಎಂದು ಹೇಳಿದರು.

ಮೋದಿಯವರನ್ನ ಸೋಲಿಸಬೇಕೆಂದು ಪ್ರತಿಪಕ್ಷಗಳ ನಾಯಕರು ಒಗ್ಗಟ್ಟಾಗುತ್ತಿದ್ದಾರೆ. ಅದು ಸಾಧ್ಯವಿಲ್ಲದ ಮಾತು ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಗೌರವ, ಮನ್ನಣೆ ಸಿಗುತ್ತಿದೆ ಎಂದು ಹೇಳಿದರು.

 

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.