

ಕೊಡಗು: ಕೊಡಗಿನಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿ ಮೂವರನ್ನು ಬಂಧಿಸಿದ್ದಾರೆ.
ದಾಳಿಯ ವೇಳೆ ಆರೋಪಿಗಳಿಂದ ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 2 ನಾಡ ಬಂದೂಕು, 1 ನಾಡ ಪಿಸ್ತೂಲು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿ ನಡೆಸಿದ ಪೊಲೀಸರು ಶಿವರಾಮ್, ರವಿ, ಕೋಟಿ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ಅವರ ಗುಂಪಿನ ನಾಯಕನಾಗಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಕೇರಳದ ಇಡುಕ್ಕಿ ಮೂಲದ ಸುರೇಶ್ (42) ನೇತೃತ್ದಲ್ಲೇ ಅಕ್ರಮ ಶಸ್ತ್ರಾಸ್ತ್ರಗಳು ಸಿದ್ಧವಾಗುತ್ತಿದ್ದವು ಎಂಬ ಮಾಹಿತಿ ಲಭ್ಯವಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.