May 30, 2025 12:35:53 PM
WhatsApp Image 2023-09-16 at 12.51.26 PM

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರುವಿನಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಧರ್ಮಸ್ಥಳ ಫೊಲೀಸರು ಭೇದಿಸಿದ್ದಾರೆ.

ಬಂದಾರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ದೂರು ನೀಡಿದ್ದು, ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಸಂದೇಶ್ ಗೌಡ ಎಂಬವರ ವಿರುದ್ದ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ಇದೀಗ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

33, 600 ರೂ. ಮೌಲ್ಯದ  ಸುಮಾರು 48 ಟನ್ ನಷ್ಟು ಅಕ್ರಮ ಮರಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಲ್ಲಿ ಕಳೆದ ಎರಡು ವರ್ಷಗಳಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮರಳು ಶೇಖರಣೆ ಮಾಡಿ ವ್ಯವಹಾರ ನಡೆಸಲಾಗುತ್ತಿತ್ತು ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿತ್ತು.

About The Author

Leave a Reply

Your email address will not be published. Required fields are marked *

<p>You cannot copy content of this page.</p>