March 21, 2026
WhatsApp Image 2025-10-16 at 9.20.24 AM
ಬೆಂಗಳೂರು: ಜಾತಿ ಸಮೀಕ್ಷೆ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದೆ. ಈ ನಡುವೆ ಇನ್ಫೋಸಿಸ್​​ ಮುಖ್ಯಸ್ಥರಾದ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ದಂಪತಿ ಸಮೀಕ್ಷೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ಈ ಕುರಿತಾಗಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದೆ. ಈ ಕುರಿತಾಗಿ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ. ನಾವು ಹಿಂದುಳಿದ ಯಾವು ಜಾತಿಗೂ ಸೇರುವರಲ್ಲ. ಆದ್ದರಿಂದ ಈ ಸಮೀಕ್ಷೆ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹಾಗಾಗಿ ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಮತ್ತು ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆ’ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಸದಾಶಿವನಗರಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್​ ಮನೆಯಲ್ಲಿ ಗಣತಿದಾರರು ಸಮೀಕ್ಷೆ ಮಾಡಿದ್ದರು. ಡಿಕೆ ಶಿವಕುಮಾರ್​ ಸೇರಿದಂತೆ ಕುಟುಂಬದವರು ಭಾಗಹಿಸಿದ್ದರು. ಧರ್ಮ, ಜಾತಿ ಸೇರಿದಂತೆ ಪ್ರಮುಖ ಪ್ರಶ್ನೆಗಳನ್ನ ಕೇಳಲಾಗಿತ್ತು. ಅದರಂತೆ ಡಿಕೆ ಶಿವಕುಮಾರ್​ ಸಮಾಧಾನವಾಗಿ ಉತ್ತರ ಕೊಟ್ಟಿದ್ದರು. ಎಷ್ಟೆಲ್ಲಾ ಮಾಹಿತಿ ಕೊಟ್ಟ ಡಿಕೆ ಶಿವಕುಮಾರ್​ಗೆ​ ಗಣತಿದಾರರ ಮತ್ತಷ್ಟು ಪ್ರಶ್ನೆಗಳನ್ನ ಕೇಳಿದ್ದರು. ತರತರ ಪ್ರಶ್ನೆಗೆ ಮರು ಪ್ರಶ್ನೆ ಮಾಡಿದ್ದರು. ಪ್ರಶ್ನೆ ಕೇಳೋಕೆ ಇಷ್ಟೊತ್ತು ಯಾಕೆ ತೆಗೆದುಕೊಳ್ತೀರಾ?, ಟೂ ಮಚ್​ ಕ್ವಶ್ಚನ್ ಎಂದು ಗರಂ ಆಗಿದ್ದರು. ​ಇನ್ನು ಜಾತಿಗಣತಿಯಲ್ಲಿ ಭಾಗವಹಿಸದೆ ಇರುವುದು ಸೂಕ್ತ. ಒಂದು ವೇಳೆ ಭಾಗವಹಿಸಿದರೆ, ವೈಯಕ್ತಿಕ ಮಾಹಿತಿಯ ದುರುಪಯೋಗ ಪಡಿಸಿಕೊಳ್ಳುವ ಅಪಾಯವಿದೆ ಎಂದು ಇತ್ತೀಚೆಗೆ ಹಿರಿಯ ನ್ಯಾಯವಾದಿ ಬಿ.ವಿ ಆಚಾರ್ಯ ಅವರು ಅಭಿಪ್ರಾಯಪಟ್ಟಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.