ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ ಯುವತಿ. ಅಪಘಾತದಲ್ಲಿ ಬೈಕ್ ಸವಾರ ಬೆಳಪುವಿನ ಆಸೀಫ್ ಎಂಬವರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಉಡುಪಿ ಕಡೆಯಿಂದ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಉಚ್ಚಿಲ ರಾ.ಹೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಬೈಕ್ ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನಿಹಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಆಸೀಫ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನಿಹಾಳ ಮತ್ತು ಆಸೀಫ್ ಇಬ್ಬರಿಗೆ ವಿವಾಹ ನಿಶ್ಚಯವಾಗಿತ್ತು.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.