ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅನಾರೋಗ್ಯ ಕಾಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸ್ವತಃ ಸಚಿವರೇ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು ಫೋನ್ ಮೂಲಕ ಸಂಪರ್ಕಿಸಬಹುದು ಎಂಸು ತಿಳಿಸಿದ್ದಾರೆ.
“ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ-ಕೋಟ”