May 23, 2025 8:30:25 AM
WhatsApp Image 2023-11-16 at 6.29.52 PM

ಉಡುಪಿ:  ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು ಹೊರಬಿದ್ದಿವೆ. ಇದರ ಬೆನ್ನಲ್ಲೇ ಆರೋಪಿಯನ್ನು ಸ್ಥಳ ಮಹಜರು ಮಾಡಲು ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಬೆಳಗ್ಗೆಯಿಂದಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದು, 11.30 ಗಂಟೆಗೆ ಆರೋಪಿಯನ್ನು ಸ್ಥಳ ಮಹಜರು ಸ್ಥಳಕ್ಕೆ ಬರುವುದಾಗಿ ಹೇಳಲಾಗಿತ್ತು. ಆದರೆ ಸಂಜೆ 4.30 ಕ್ಕೆ ಆರೋಪಿಯನ್ನು ಕರೆತರಲಾಗಿತ್ತು. ಈ ಎಲ್ಲಾ ಪ್ರಕ್ರಿಯೆ ನಡೆಯುವ ಸಂದರ್ಭ ಹಸೀನಾ ಅವರ ಪತಿ ಕುಸಿದು ಬಿದ್ದಿರುವ ಘಟನೆ ಕೂಡಾ ನಡೆಯಿತು. ಬೆಳಗ್ಗಿನಿಂದಲೇ ಜನ ಆರೋಪಿಯನ್ನು ನೋಡಲು ನಿಂತಿದ್ದರು.

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ವಿಚಾರಣೆಯ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ತಿಳಿಸಿದ್ದಾರೆ.

ಈ ಹತ್ಯೆ ಪ್ರಕರಣದ ತನಿಖೆಸಂಬಂಧಿಸಿದಂತೆ ಆರೋಪಿಯನ್ನು ಸ್ಥಳ ಮಹಜರು ಮಾಡಲು ಕರೆತಂದ ಸಂದರ್ಭ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಪ್ರವೀಣ್‌ ಚೌಗಲೆಯನ್ನು ಪೊಲೀಸರು ಬಿಗಿ ಬಂದೋ ಬಸ್ತ್ ನಲ್ಲಿ ಕಪ್ಪು ವಸ್ತ್ರದಲ್ಲಿ ಮುಖ ಕಾಣದಂತೆ ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಪೊಲೀಸರು ಆರೋಪಿಯನ್ನು ಮಹಜರು ಮಾಡಲು ಕರೆತಂದ ಸಂದರ್ಭ ಆತನನ್ನು ನೋಡಲು ಜನರು ಕಿಕ್ಕಿರಿದು ತುಂಬಿದ್ದರು. ಘಟನಾ ಸ್ಥಳದಲ್ಲಿ ಸುಮಾರು 400 ಕ್ಕೂ ಅಧಿಕ ಜನ ಸೇರಿದ್ದರು.

ಆರೋಪಿಯನ್ನು ಮನೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಕೆಲವರು ಬ್ಯಾರಿಕೇಡ್ ದಾಟಿ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಈ ಸಂದರ್ಭ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.ಈ ಸಂದರ್ಭ ಸ್ಥಳೀಯರು ಪೊಲೀಸ್ ಸಿಬ್ಬಂದಿಗಳಲ್ಲಿ ಬೇಡಿಕೆಯಿಟ್ಟಿದ್ದು, ಕೇವಲ ಎರಡು ನಿಮಿಷಗಳ ಕಾಲ ಆರೋಪಿಯನ್ನು ತಮಗೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ. ಇದಲ್ಲದೆ, ಈ ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಕ್ಷಿಪ್ರ ನ್ಯಾಯ ಒದಗಿಸುವಂತೆ ಪ್ರತಿಭಟನೆ ಕೂಡ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>