ಡಿ.17: ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಬಂಟ್ವಾಳ : ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ.17ರಂದು ನಡೆಯಲಿದೆ.
ಅಂದು ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಹಾಗೂ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು.
ಮಧ್ಯಾಹ್ನ 11ಗಂಟೆಗೆ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ ಸಿಂಗ್ ಭಾಗವಹಿಸಲಿರುವರು. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿದ್ದು, ಬೆಳ್ತಂಗಡಿ ಶಾಸಕ ಹರೀಶ ಪೂಂಜ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಸಚಿವ ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರ ಗಣ್ಯರು ಭಾಗವಹಿಸುವರು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಪೂಜಾರಿ ಅಧ್ಯಕ್ಷತೆ ವಹಿಸಲಿರುವರು. ಆರಂಬೋಡಿ ಗ್ರಾ.ಪಂ. ಅಧ್ಯಕ್ಷೆ ವಿಜಯಾ ಕುಂಜಾಡಿ ಅವರು ಬಹುಮಾನ ವಿತರಿಸಲಿರುವರು.ಈ ಸಂದರ್ಭದಲ್ಲಿ ಜಗತ್ಪಾಲ್ ಶೆಟ್ಟಿ ಉಮನೊಟ್ಟು, ಅರುಣ್ ರೈ ತೋಡಾರ್, ರಾಜೀವ ಶೆಟ್ಟಿ ಎಡ್ತೂರು, ಶ್ರೀಧರ್ ಮರೋಡಿ, ಮಾ|ಅಮೋಘವರ್ಷ ಅವರನ್ನು ಸಮ್ಮಾನಿಸಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Check Also

ಮಂಗಳೂರು: ವಿಡಿಯೋ ಲೈಕ್ ಮಾಡಿ 5 ಲಕ್ಷ ಕಳೆದುಕೊಂಡರು..!

ಮಂಗಳೂರು: ಆನ್‌ಲೈನ್ ಗಳಿಕೆಯ ನಕಲಿ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೆ. 28ರಂದು ದೂರುದಾರರು ಇನ್ …

Leave a Reply

Your email address will not be published. Required fields are marked *

You cannot copy content of this page.