ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ(ಗುರುವಾರ) ರಾತ್ರಿ ನೇಣಿಗೆ ಶರಣಾಗಿದ್ದಾರೆ.
ಸ್ವಾತಿ(26) ಮೃತ ದುರ್ದೈವಿ. ಗ್ಲೋಬಲ್ ವಿಲೇಜ್ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ, ಎರಡು ವರ್ಷದ ಹಿಂದೆ ದಾಮೋದರ್ ಎಂಬುವವರನ್ನು ಮದುವೆ ಆಗಿದ್ದರು.
ಗಂಡನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಾತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.