ನಾಲ್ಕು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ; ವೈದ್ಯಲೋಕಕ್ಕೆ ಅಚ್ಚರಿ

ಧ್ಯಪ್ರದೇಶ: ಮಹಿಳೆಯೊಬ್ಬಳು ನಾಲ್ಕು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಎಂಬ ಮಹಿಳೆ ನಾಲ್ಕು ಕಾಲಿನ ಮಗುವಿಗೆ ಜನ್ಮ ನೀಡಿದ್ದು, ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

 

ಹೆಣ್ಣು ಮಗುವಿನ ತೂಕ 2.3 ಕೆ.ಜಿ. ಇದೆ. ಹೆರಿಗೆಯಾಗುತ್ತಿದ್ದಂತೆ ನಾಲ್ಕು ಕಾಲನ್ನು ನೋಡಿದ ವೈದ್ಯರು ಅಚ್ಚರಿಗೊಂಡಿದ್ದಾರೆ. ಕೂಡಲೇ ಶಿಶುವನ್ನು ಗ್ವಾಲಿಯರ್‌ನ ಜಯರೋಗ್ಯ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿದ್ದಾರೆ.

ಜಯರೋಗ್ಯ ಆಸ್ಪತ್ರೆ ವೈದ್ಯ ಡಾ. ಆರ್‌.ಕೆ.ಎಸ್ ಧಾಕಡ್ ಮಾತನಾಡಿ, ಮಗುವಿಗೆ ನಾಲ್ಕು ಕಾಲುಗಳಿದ್ದು, ದೈಹಿಕ ವಿಕಲತೆ ಇದೆ. ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ, ದೇಹವು ಎರಡು ಸ್ಥಳಗಳಲ್ಲಿ ಬೆಳವಣಿಗೆಯಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳಿದ್ದು, ಆ ಕಾಲುಗಳು ನಿಷ್ಕ್ರಿಯವಾಗಿವೆ ಎಂದು ಹೇಳಿದ್ದಾರೆ.

ಮಗು ಆರೋಗ್ಯವಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ನಿಷ್ಕ್ರೀಯಗೊಂಡಿರುವ ಕಾಲುಗಳನ್ನು ತೆಗೆದುಹಾಕಲಾಗುತ್ತದೆ. ಇದರಿಂದ ಮಗು ಸಹಜವಾಗಿ ಎಲ್ಲರಂತೆ ಓಡಾಡಬಹುದು ಎಂದು ವೈದ್ಯ ಆರ್‌.ಕೆ.ಎಸ್ ಧಾಕಡ್ ಹೇಳಿದ್ದಾರೆ.

Check Also

CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ …

Leave a Reply

Your email address will not be published. Required fields are marked *

You cannot copy content of this page.